ಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ*
ಸಂಸದ ಜಗದೀಶ್ ಶೆಟ್ಟರ್ ಭರವಸೆ; ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆ* *ಬೆಳಗಾವಿ, ಜೂನ್ 25*: ಹಾಕಿಯ ಪವಿತ್ರ ನೆಲೆ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿಯಲ್ಲಿ ಮತ್ತೊಮ್ಮೆ ಕ್ರೀಡಾ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಂದ್ರ ಸರ್ಕಾರದ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಗೂ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಹಾಕಿ ಮೈದಾನ ನಿರ್ಮಾಣಕ್ಕೆ...









