Uncategorized

ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ! ಕಠಿಣ ಕ್ರಮಕ್ಕೆ ತಾಲೂಕು ಬಿಜೆಪಿ ಒತ್ತಾಯ!!

19Views

ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ! ಕಠಿಣ ಕ್ರಮಕ್ಕೆ ತಾಲೂಕು ಬಿಜೆಪಿ ಒತ್ತಾಯ!!

ಶಿಗ್ಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಇಂದು ಪಟ್ಟಣದಲ್ಲಿ ಬಿಜೆಪಿ ವತಿಯಿಂದ ವತಿಯಿಂದ ಚನ್ನಮ್ಮ ವೃತ್ತದಲ್ಲಿ ‘ಜನಾಗ್ರಹ’ ಪ್ರತಿಭಟನೆ ನಡೆಯಿತು.

 

ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು ಹೊಂದಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮಾನ್ಯ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸಿದರು

Leave a Reply