ಖಾನಾಪುರ, ಕಿತ್ತೂರು, ಬೈಲಹೊಂಗಲ ರೈತರಿಂದ ಹನಿ ನೀರಾವರಿ ಕಾರ್ಯಾದೇಶ ವಿಳಂಬಕ್ಕೆ ಆಕ್ರೋಶ.
ಬೆಳಗಾವಿ:11.12.2025 ರಾಜ್ಯದ ಅತಿ ಹೆಚ್ಚು ತರಕಾರಿ ಉತ್ಪಾದಿಸುವ ಪ್ರದೇಶಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯ ಖಾನಾಪುರ, ಕಿತ್ತೂರು, ಮತ್ತು ಬೈಲಹೊಂಗಲ ತಾಲ್ಲೂಕುಗಳ ರೈತರಿಗೆ ಸತತ ಎರಡು ವರ್ಷಗಳಿಂದ ಹನಿ ನೀರಾವರಿ ಸೌಲಭ್ಯದ ಕಾರ್ಯಾದೇಶಗಳನ್ನು ನೀಡದಿರುವ ಕುರಿತು ‘ನೇಗಿಲ ಯೋಗಿ ರೈತ ಸೇವಾ ಸಂಘ’ವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಮೂರೂ ಹಿಂದುಳಿದ ತಾಲ್ಲೂಕುಗಳಲ್ಲಿ ಸುಮಾರು ೧೦,೦೦೦ ರಿಂದ ೧೫,೦೦೦ ಹೆಕ್ಟೇರ್ ಪ್ರದೇಶದಲ್ಲಿ ತರಕಾರಿ ಬೆಳೆಯಲಾಗುತ್ತದೆ. ಇಲ್ಲಿನ ಉತ್ಪನ್ನಗಳು ಹೈದರಾಬಾದ್, ಕೊಲ್ಲಾಪುರ, ಬಾಗಲಕೋಟೆಯಂತಹ ರಾಜ್ಯದ ಹಾಗೂ ಹೊರರಾಜ್ಯದ ಮಾರುಕಟ್ಟೆಗಳಿಗೆ ಮತ್ತು ವಿದೇಶಗಳಿಗೂ ರಫ್ತಾಗುತ್ತವೆ. ಈ ಪ್ರದೇಶದ ರೈತರು ತಮ್ಮ ಜೀವನಕ್ಕಾಗಿ ಸಂಪೂರ್ಣವಾಗಿ ತರಕಾರಿ ಬೆಳೆಯನ್ನೇ ಅವಲಂಬಿಸಿದ್ದಾರೆ.
ಪ್ರತಿ ಎಕರೆಗೆ ₹೪೦,೦೦೦ ದಿಂದ ₹೫೦,೦೦೦ ಖರ್ಚು ಮಾಡಿ, ಡಿಸೆಂಬರ್-ಜನವರಿಯಲ್ಲಿ ತರಕಾರಿ ಸಸಿಗಳನ್ನು ನಾಟಿ ಮಾಡುವ ಹಂತದಲ್ಲಿ, ರೈತರಿಗೆ ನೀರಿನ ಅಭಾವ ಮತ್ತು ಕಾರ್ಮಿಕರ ಕೊರತೆಯು ತೀವ್ರ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗಳಿಗೆ ಹನಿ ನೀರಾವರಿ ಪದ್ಧತಿಯೇ ಪರಿಹಾರವಾಗಿದ್ದು, ಇದರಿಂದ ನೀರಿನ ಉಳಿತಾಯ, ಕಳೆ ನಿಯಂತ್ರಣ ಮತ್ತು ರಸಾವರಿ ಮೂಲಕ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ.
ಆದರೆ, ಸಂಘದ ಅಧ್ಯಕ್ಷ ರವಿ ಪಾಟೀಲ ಹಾಗೂ ಪದಾಧಿಕಾರಿಗಳಾದ ಕಲ್ಲಪ್ಪ ಹರಿಯಾಲ, ಸೋಮನಿಂಗ ಮಳ್ಳಿಕೇರಿ ಮತ್ತು ಮನೋಹರ್ ಸುಳೇಭಾವಿಕರ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ, ೨೦೨೪-೨೫ ಹಾಗೂ ೨೦೨೫-೨೬ನೇ ಸಾಲುಗಳಲ್ಲಿ ಹನಿ ನೀರಾವರಿ ಯೋಜನೆಗೆ ಸಲ್ಲಿಸಿದ ಅರ್ಜಿಗಳಿಗೆ ಯಾವುದೇ ಕಾರ್ಯಾದೇಶ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.
ಜೊತೆಗೆ, ಹೊಸ ತಾಂತ್ರಿಕತೆಗಳು ಮತ್ತು ಪ್ಲಾಸ್ಟಿಕ್ ಹೊದಿಕೆಯಂತಹ ಇತರ ಸೌಲಭ್ಯಗಳನ್ನೂ ನೀಡದೆ ಸರ್ಕಾರವು ಈ ಪ್ರದೇಶದ ರೈತರನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಇತ್ತೀಚಿನ ದಿನಗಳಲ್ಲಿ ಚುನಾಯಿತ ಸರ್ಕಾರಗಳು ರೈತ ಮತ್ತು ಬಡ ವರ್ಗದವರನ್ನು ಕಡೆಗಣಿಸುತ್ತಿರುವುದು ಖಂಡನೀಯ,” ಎಂದು ಸಂಘವು ತೀವ್ರ ಎಚ್ಚರಿಕೆ ನೀಡಿದೆ. ತಕ್ಷಣವೇ ನಿಗದಿಪಡಿಸಿದ ಗುರಿಗಳ ಅನ್ವಯ ಕಾರ್ಯಾದೇಶಗಳನ್ನು ನೀಡಿ, ಹೆಚ್ಚಿನ ಅನುದಾನ ಒದಗಿಸಿ ರೈತರನ್ನು ಸಬಲೀಕರಣಗೊಳಿಸಬೇಕು. ಇಲ್ಲವಾದಲ್ಲಿ, “ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ನಿರ್ಣಯಗಳನ್ನು ಕೈಗೊಳ್ಳಬೇಕಾಗುತ್ತದೆ,” ಎಂದು ನೇಗಿಲ ಯೋಗಿ ರೈತ ಸೇವಾ ಸಂಘವು ರಾಜ್ಯ ಸರ್ಕಾರವನ್ನು ಎಚ್ಚರಿಸಿದೆ.
You Might Also Like
ಬೆಳಗಾವಿ ನಗರದ 11 ಮನೆಗಳತನ ಮಾಡಿರುವ ಐದು ಆರೋಪಿಗಳ ಬಂಧನ
ಬೆಳಗಾವಿ ನಗರದ 11 ಮನೆಗಳ್ಳತನ ಪ್ರಕರಣದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿ ಅವರಿಂದ 67 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್...
ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಬೆಳಗಾವಿ, ಏ.15(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ ಬಳಕೆ ಕಡಿಮೆ ಮಾಡುವಂತೆ...
ಮಹಾವೀರ ಜಯಂತಿ ಆಚರಣೆಗೆ ತಹಶೀಲ್ದಾರ್ ಅಸಹಕಾರ: ಜೈನ ಸಮುದಾಯದ ಆಕ್ರೋಶ
ಆಡಳಿತ ನಿರ್ಲಕ್ಷ್ಯದ ವಿರುದ್ಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ದೂರು; ಬಹಿರಂಗ ಕ್ಷಮೆಯಾಚನೆಗೆ ಆಗ್ರಹ ಬೆಳಗಾವಿ:10.4.2026 ಅಹಿಂಸೆ ಮತ್ತು ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಜಯಂತಿಯ ಆಚರಣೆಯ ವಿಷಯದಲ್ಲಿ...
ರೈತನ ಮಗಳ ಪಿಯುಸಿ ಸಾಧನೆ
ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ...
‘ಜಂಬಗಿ ಸೂಪರ್ ಸ್ಪೆಷಾಲಿಟಿ ನೇತ್ರ ಸಂಸ್ಥೆ’ ಶೀಘ್ರ ಲೋಕಾರ್ಪಣೆ*
ಫೆಬ್ರವರಿ 22 ರಂದು ಉದ್ಘಾಟನೆ: ಉತ್ತರ ಕರ್ನಾಟಕಕ್ಕೆ ಲಭ್ಯವಾಗಲಿದೆ ಅತ್ಯಾಧುನಿಕ 4D ರೋಬೋಟಿಕ್ ಶಸ್ತ್ರಚಿಕಿತ್ಸೆ ಬೆಳಗಾವಿ:19.2.2026 ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಜನರಿಗೆ ವಿಶ್ವದರ್ಜೆಯ ನೇತ್ರ...





